ಬೆಂಗಳೂರು:- ಲೋಕಸಭಾ ಚುನಾವಣೆ ಸಕಲ ಸಿದ್ಧತೆ ಕೈಗೊಂಡಿರುವ ಬಿಜೆಪಿ ಇಂದು ಅಥವಾ ನಾಳೆಯೊಳಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಕೆಲ ಕ್ಷೇತ್ರದ ಟಿಕೆಟ್ ಪೆಂಡಿಂಗ್ ಆಗಿವೆ. ಇನ್ನೂ ಕೆಲವು ಮಾತುಕತೆ ಹಂತದಲ್ಲಿದ್ದು, ಇಂದು ಅಥವಾ ನಾಳೆಯೊಳಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಹಿತಿ ನೀಡಿದರು.
ಗೆಲ್ಲುವ ಮಾನದಂಡದ ಮೇಲೆ ಅಭ್ಯರ್ಥಿಗಳಿಗೆ ಟಿಕೆಟ್ ತೀರ್ಮಾನ ಮಾಡುತ್ತಿದ್ದಾರೆ. ಹೊಸ ಮುಖಗಳಿಗೂ ಅವಕಾಶ ಕೊಟ್ಟಿದ್ದಾರೆ, ಹಳಬರಿಗೂ ಅವಕಾಶವಿದೆ. ಹಾಲಿ ಸಂಸದರ ಕಾರ್ಯವೈಖರಿ ಬಗ್ಗೆಯೂ ಚರ್ಚೆ ಆಗಿದೆ. ಟಿಕೆಟ್ ವಿಚಾರವಾಗಿ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.