ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಈ ಐವರು ಸಚಿವರು ಸಾಕಷ್ಟು ಆಕ್ಟಿವ್ ಆಗಿ ಇದ್ದಾರೆ. ಬಿಜೆಪಿಯ ಮತೀಯ ಹೇಳಿಕೆಗಳಿಗೆ ಈ ಸಚಿವರು ತಕ್ಕ ಪ್ರತ್ಯುತ್ತರ ನೀಡುತ್ತಾ ಬಂದಿದ್ದಾರೆ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಕಂದಾಯ ಇಲಾಖೆ ಕೃಷ್ಣಭೈರೇಗೌಡ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ , ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸರ್ಕಾರದ ವಕ್ತಾರರಾಗಿ ನೇಮಿಸಲಾಗಿದೆ.