ಬೆಂಗಳೂರು: ರಾಜಧಾನಿಯಲ್ಲಿ (Bengaluru Water Crisis) ನೀರಿನ ಸಮಸ್ಯೆ ತಲೆದೋರಿದೆ. ಸಮಸ್ಯೆ ನಿಭಾಯಿಸಲು ಹಲವು ಕ್ರಮಕೈಗೊಂಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (Bangaluru Water Supply and Sewerage Board), ನಗರದ ಈಜುಕೊಳಗಳಿಗೆ ಕಾವೇರಿ ನೀರನ್ನು ಬಳಸಬಾರದು ಎಂದು ಆದೇಶ ಹೊರಡಿಸಿದೆ.
ಮೋದಿ ಇಲ್ಲದಿದ್ದರೆ ನಾನು ಏನು ಇಲ್ಲ, ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರತಪ್ ಸಿಂಹಾ!
ನಗರದ ಎಲ್ಲಾ ಕಡೆಗೂ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಹೀಗಾಗಿ ಈ ಕ್ರಮಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ಹಾಕಲಾಗುವುದು ಎಂದು ಮಂಡಳಿ ತಿಳಿಸಿದೆ
ಈ ಬಾರಿ ಮುಂಗಾರು ಮಳೆ ಕೊರತೆಯಿಂದ ನೀರಿನ ಅಭಾತ ಉಂಟಾಗಿದೆ. ಅಂತರ್ಜಲ ಮಟ್ಟ ಕುಸಿದಿದೆ. ನೀರು ಪೋಲಾಗುವುದನ್ನು ತಡೆಗಟ್ಟಲು ನಗರದಲ್ಲಿ ಕುಡಿಯುವ ನೀರನ್ನು ಈಜುಕೊಳ ಹಾಗೂ ಇತರೆ ಉದ್ದೇಶಗಳಿಗಾಗಿ ಬಳಕೆ ಮಾಡದಿರುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.
ನಿಯಮ ಉಲ್ಲಂಘಿಸಿದವರಿಗೆ ಆರಂಭದಲ್ಲಿ 5 ಸಾವಿರ ರೂ. ದಂಡ ಹಾಕಲಾಗುವುದು. ನಂತರವೂ ನಿಯಮ ಉಲ್ಲಂಘಿಸಿದರೆ 5,500 ರೂ. ದಂಡದ ಜೊತೆಗೆ ಈಜುಕೊಳದ ಮಾಲೀಕನ ವಿರುದ್ಧ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದೆ