ಕಳೆದ ಎರಡು ಮೂರು ದಿನಗಳಿಂದ ಇಳಿಕೆಯ ಹಾದಿಯಲ್ಲಿದೆ. ಇಂದು ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 39 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಹಳದಿ ಲೋಹದ ಬೆಲೆ ತುಸು ತಗ್ಗಿದೆ. ಬೆಳ್ಳಿ ಬೆಲೆಯೂ ಭಾರತದಲ್ಲಿ ಗ್ರಾಮ್ಗೆ 90 ಪೈಸೆಯಷ್ಟು ಕಡಿಮೆ ಆಗಿದೆ. ಕಳೆದ ವಾರ ವಿಪರೀತ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಆಭರಣ ಪ್ರಿಯರಿಗೆ ನಿಟ್ಟುಸಿರುಬಿಡುವಂತೆ ಮಾಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,510 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 14ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 752 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 751 ರೂ