ಕರಾವಳಿ, ಮಲೆನಾಡು, ಅರೆಮಲೆನಾಡು ಪ್ರಾಂತ್ಯಕ್ಕೆ ಸೀಮಿತಗೊಂಡಿದ್ದ ಅಡಕೆ ಕೃಷಿ ಕಳೆದೆರಡು ವರ್ಷಗಳಿಂದ ವ್ಯಾಪಕ ಪ್ರಮಾಣದಲ್ಲಿ ವಿಸ್ತರಣೆಗೊಳ್ಳುತ್ತಿದ್ದು, ಅಡಕೆ ಮಾರುಕಟ್ಟೆಯ ಭವಿಷ್ಯ ಮಂಕಾಗಿದೆ.ಅಡಕೆ ಕೃಷಿಗೆ ತಗುಲಿರುವ ಹಳದಿ ರೋಗ ಇಡೀ ಬೆಳೆಯ ಬುಡವನ್ನೇ ಅಲ್ಲಾಡಿಸಿದೆ.
ರೋಗದಿಂದ ಉಂಟಾದ ತಲ್ಲಣ, ಬೆಳೆ ವಿಸ್ತರಣೆಯಿಂದ ಉಂಟಾದ ಸಂಚಲನ ಮತ್ತು ಕಳ್ಳ ನುಸುಳುವಿಕೆ ಅವಾಂತರಗಳು ನಿರಂತರವಾಗಿ ಬೆಳೆಯ ಮೇಲೆ ತೂಗುಕತ್ತಿಯಾಗಿ ನೇತಾಡುತ್ತಿದ್ದು, ಅಡಕೆ ಕ್ಷೇತ್ರದ ಹಿತರಕ್ಷಣೆಗಾಗಿ ಸರಕಾರ ಸಮಗ್ರ ನೀತಿ ರೂಪಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.
ಅಡಕೆ ಕೃಷಿಗೆ ತಗುಲಿರುವ ಹಳದಿ ರೋಗ ಇಡೀ ಬೆಳೆಯ ಬುಡವನ್ನೇ ಅಲ್ಲಾಡಿಸಿದೆ. ರೋಗದಿಂದ ಉಂಟಾದ ತಲ್ಲಣ, ಬೆಳೆ ವಿಸ್ತರಣೆಯಿಂದ ಉಂಟಾದ ಸಂಚಲನ ಮತ್ತು ಕಳ್ಳ ನುಸುಳುವಿಕೆ ಅವಾಂತರಗಳು ನಿರಂತರವಾಗಿ ಬೆಳೆಯ ಮೇಲೆ ತೂಗುಕತ್ತಿಯಾಗಿ ನೇತಾಡುತ್ತಿದ್ದು,
ಕಳೆದ ವರ್ಷ ಹಳೆ ಅಡಕೆಯ ಜತೆಯಲ್ಲೇ ಸಾಗುತ್ತಿದ್ದ ಹೊಸ ಅಡಕೆ ಧಾರಣೆ ಈಗ 360 ರೂ.ನ ಆಸುಪಾಸಿನಲ್ಲಿದೆ. ಕೆಲ ದಿನಗಳಿಂದ ಧಾರಣೆ ಸ್ಥಿರವಾಗಿದ್ದರೂ, ಏರು ಹಾದಿಯ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಬೆಳೆಗಾರರಲ್ಲಿಲ್ಲ. ಆದರೂ ದೀಪಾವಳಿ ಬಳಿಕ ಮಾರುಕಟ್ಟೆ ಚಿಗುರುವ ಆಶಾವಾದ ವ್ಯಕ್ತವಾಗುತ್ತಿದೆ