ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಪತ್ನಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭೆ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಭೋಧಿಸಿದರು.
Gold Shop Firing: ಚಿನ್ನದ ಮಳಿಗೆ ಮಾಲೀಕನ ಮೇಲೆ ಗುಂಡಿನ ದಾಳಿ: ಇಬ್ಬರ ಸ್ಥಿತಿ ಗಂಭೀರ!
ಜಗದೀಪ್ ಧನಕರ್ ಅವರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಷನ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಕೂಡಾ ಭಾಗಿಯಾಗಿದ್ದು ವಿಶೇಷವಾಗಿತ್ತು. ಕೇಂದ್ರ ಸಚಿವ ಪಿಯೂಷ್ ಗೋಯಲ್, ನಂದನ್ ನೀಲಕೇಣಿ ಈ ವೇಳೆ ಉಪಸ್ಥಿತರಿದ್ದರು.