ಬೆಂಗಳೂರು:- ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀ ಶ್ರೀ 1008 ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರಿಗೆ ಭವ್ಯ ಸ್ವಾಗತ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ಪರಿಷತ್ ಸದಸ್ಯ ಟಿಎ ಶರವಣ ಅವರು ಭಾಗಿಯಾಗಿದರು. ಇದೇ ವೇಳೆ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರಿಗೆ ಟಿಎ ಶರವಣ ಅವರು ಅಭಿನಂದನೆ ಸಲ್ಲಿಸಿದರು.
ಅಯೋಧ್ಯೆಯಲ್ಲಿ ಐತಿಹಾಸಿಕ ಬಾಲರಾಮ ಪ್ರತಿಷ್ಠಾಪನಾ ಕಾರ್ಯ ಹಾಗೂ ಮಂಡಲೋತ್ಸವಗಳನ್ನು ವೈಭವದಿಂದ ನೆರವೇರಿಸಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರಿಗೆಗಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಹೀಗಾಗಿ ಸಮಾರಂಭದಲ್ಲಿ ಭಾಗಿಯಾದ ಪರಿಷತ್ ಸದಸ್ಯ ಟಿಎ ಶರವಣ ಅವರು, ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದರು. ಹಾಗೂ ಸಮಾರಂಭ ಕುರಿತು ಕೆಲವು ಸಮಯ ಮಾತನಾಡಿದರು.
ಸಮಾರಂಭದಲ್ಲಿ ಸಾಕಷ್ಟು ಗಣ್ಯರು ಭಾಗಿಯಾಗಿದ್ದರು.