ಮುಂಬೈ:- ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
3 ದಿನದ ಹಿಂದೆ ಔರಾದ್ ನಿವಾಸದಲ್ಲಿದ್ದ ವೇಳೆ ಪ್ರಭು ಸೌ ಅವರ ಎದೆ ಬಡಿತದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಪ್ರಭು ಚೌಹಾಣ್ ಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಪ್ರಭು ಚೌಹಾಣ್ ಆರೋಗ್ಯ ಸ್ಛಿರವಾಗಿದೆ
ಬೀದರ್ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ಅಲ್ಲದೇ ಖುದ್ದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್, ಮತ್ತೆ ಬೀದರ್ ಟಿಕೆಟ್ ಭಗವಂತ್ ಖೂಬಾಗೆ ನೀಡಿದೆ.
ಭಗವಂತ್ ಖೂಬಾಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದೆ