ಮಂಗಳೂರು:- 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ಮಾಡುವ ವಿಚಾರವಾಗಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ
ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ. ಹಾಗೆಂದು ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯದ ಮಟ್ಟಿಗಂತೂ ವದಂತಿಯಷ್ಟೆ ಎಂದು ಹೇಳಿದ್ದಾರೆ
2014, 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ಅಂಥದ್ದೊಂದು ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನು ಸ್ವಲ್ಪ ಸಡಿಲ ಮಾಡುತ್ತೇನೆ. ಹಾಗೆ ಆಗಬೇಕು ಎಂದು ಏನಾದರೂ ಭಗವಂತನ ಇಚ್ಛೆ ಇದ್ದರೆ ಅದು ಆಗಿಯೇ ಆಗುತ್ತದೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕ ಮಾಡಿಲ್ಲ ಎಂದು ಸೂಲಿಬೆಲೆ ಹೇಳಿದ್ದಾರೆ.