ಒಡಿಶಾ:- ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಣಿ ನಗರದ ಕೊಳೆಗೇರಿಯಲ್ಲಿ ಘಟನೆ ಜರುಗಿದೆ.
ಪತ್ನಿ ಮದ್ಯವ್ಯಸನಿಯಾಗಿದ್ದು, ಮಂಗಳವಾರ ಮಧ್ಯಾಹ್ನ ಕುಡಿದು ಬಂದು ಆತನನ್ನು ನಿಂದಿಸಲು ಆರಂಭಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ವ್ಯಕ್ತಿ ಆಕೆಯನ್ನು ಮರದ ಹಲಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಕೋಣೆಯೊಂದರಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದರು. ಗುರುವಾರ, ಅವರ ಹಿರಿಯ ಮಗ ಮನೆಗೆ ಬಂದಾಗ ಮಾಹಿತಿ ಸಿಕ್ಕಿತ್ತು. ಬಳಿಕ ಪೊಲೀಸರಿಗೆ ಈ ವಿಷಯ ತಿಳಿಸಿದ್ದ. ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.