ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದೆ. ಈ ಮೂಲಕ ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಅರಮನೆಯ AC ರೂಂನಲ್ಲಿ ರಾಜನಾಗಿರುವ ಬದಲು, ಪ್ರಜೆಗಳಂತೆ ಬದುಕಲು ಬಂದ್ರೆ ಸ್ವಾಗತಿಸದಿರಲಾಗುತ್ತಾ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ತಿರುಗೇಟು ನೀಡಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್,
ಎಸಿ ರೂಮ್ನಿಂದ ಜನರ ಮಧ್ಯೆ ಬರುವುದು ಕಷ್ಟವೇನು ಅಲ್ಲ. ನಾನು ಈಗಾಗಲೇ ಜನರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಬಿಜೆಪಿ ಕಾರ್ಯವೈಖರಿ ಗಮನಿಸಿ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಅಬ್ಬಬ್ಬಾ ಗೊತ್ತೇ ಇರಲಿಲ್ಲ..! ಈ 5 ಸೊಪ್ಪುಗಳಲ್ಲಿ ಅಡಗಿವೆ ಅದ್ಭುತ ಆರೋಗ್ಯ ಪ್ರಯೋಜನಗಳು
ರಾಜಕಾರಣದ ಮೂಲಕ ಸಾಮಾಜಿಕ ಸಮಸ್ಯೆ ಬಗೆಹರಿಸಲು ಸಾಧ್ಯ. ಇದೇ ಕಾರಣಕ್ಕೆ ನಾನು ರಾಜಕಾರಣಕ್ಕೆ ಬರಲು ತೀರ್ಮಾನಿಸಿದ್ದೇನೆ. ರಾಜಕೀಯದಲ್ಲಿ ಇರುವ ಸವಾಲುಗಳನ್ನು ಅರಿತೇ ಬಂದಿದ್ದೇನೆ. ಕೇವಲ ಅವಕಾಶ ಸಿಕ್ಕಿದೆ ಅಂತಾ ನಾನು ರಾಜಕಾರಣಕ್ಕೆ ಬಂದಿಲ್ಲ. ಪ್ರತಾಪ್ ಸಿಂಹ ಸೇರಿ ಹಲವರು ಉತ್ತಮ ಅಡಿಪಾಯ ಹಾಕಿದ್ದಾರೆ ಎಂದಿದ್ದಾರೆ.