ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರನ್ನು 2024ರ ಟಿ20 ವಿಶ್ವಕಪ್ ತಂಡದಿಂದ ಕೈಬಿಡಲಾಗುತ್ತದೆ ಎಂಬ ಸುದ್ದಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ.
ಇದು ಸುಳ್ಳು, ಅಭಿಮಾನಿಗಳ ದೃಷ್ಟಿಯಿಂದ ಕ್ರಿಕೆಟ್ ಅನ್ನು ವಿಸ್ತರಿಸುವ ದೃಷ್ಟಿಯಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಅಮೆರಿಕಾದಲ್ಲಿ ಆಯೋಜಿಸಿದೆ. ಭಾರತ ಹಾಗೂ ಪಾಕಿಸ್ತಾನ ಪಂದ್ಯ ನ್ಯೂಯಾರ್ಕ್ನಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿಗೆ ವಿಶ್ವದ ಯಾವುದೇ ಆಟಗಾರನಿಗಿಲ್ಲದ ಕ್ರೇಜ್ ಇದೆ. ಟಿ20 ವಿಶ್ವಕಪ್ಗೆ ಭಾರತ ತಂಡದಿಂದ ಕೊಹ್ಲಿಯನ್ನು ಖಂಡಿತವಾಗಿಯೂ ಆಯ್ಕೆ ಮಾಡಲಾಗುವುದು,” ಎಂದು ಸ್ಟುವರ್ಟ್ ಬ್ರಾಡ್ ಹೇಳಿದ್ದಾರೆ.
ಈ ವರ್ಷ ಜೂನ್ ಒಂದರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಆದರೆ, 2013ರಿಂದ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗದ ಭಾರತ ತಂಡ, ಈ ಬಾರಿ ಆಟಗಾರರ ಆಯ್ಕೆಯತ್ತ ಗಮನ ಹರಿಸಿದೆ. ಇದರ ಭಾಗವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿದುಬರುತ್ತಿದೆ. ಇದರೊಂದಿಗೆ ಈ ಟೂರ್ನಿಗೆ ವಿರಾಟ್ ಕೊಹ್ಲಿ ಅವರನ್ನು ಆಯ್ಕೆ ಮಾಡದಿರಲು ಬಿಸಿಸಿಐ ಚಿಂತನೆ ನಡೆಸಿದೆ ಎಂಬ ವರದಿಯಾಗಿದೆ. ಯಶಸ್ವಿ ಜೈಶ್ವಾಲ್, ರಿಂಕು ಸಿಂಗ್, ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರಂತಹ ಯುವ ಆಟಗಾರರನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.