ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ 2024 ರ ಎಲಿಮಿನೇಟರ್ ಪಂದ್ಯವು ಇಂದು ನಡೆಯುತ್ತಿದೆ.
ಈ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಸ್ಮೃತಿ ಮಂಧಾನಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಫೈನಲ್ಗೆ ಅರ್ಹತೆ ಪಡೆಯಲ್ಲಿದ್ದು ಅಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಮೇಲೆ ಹೇಳಿದಂತೆ ಈ ಪಂದ್ಯ ಉಭಯ ತಂಡಗಳಿಗೂ ವಿಶೇಷ ಎನಿಸಿದೆ. ಒಂದೆಡೆ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್ಪ್ರೀತ್ ಕೌರ್ ಬೆಂಗಳೂರನ್ನು ಸೋಲಿಸಿ ಫೈನಲ್ ಪ್ರವೇಶಿಸುವ ಇರಾದೆಯಲ್ಲಿದ್ದಾರೆ ಅದೇ ಸಮಯದಲ್ಲಿ, ಸ್ಮೃತಿ ಮಂಧಾನ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ಆಡುವ ನಿರೀಕ್ಷೆಯಲ್ಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಯಾವ ತಂಡವು ಫೈನಲ್ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗುತ್ತದೆ ಮತ್ತು ಯಾವ ತಂಡದ ಡಬ್ಲ್ಯುಪಿಎಲ್ ಪ್ರಯಾಣ ಇಲ್ಲಿಗೆ ಕೊನೆಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.