ಮಂಡ್ಯ:- ಸುಮಲತಾ ಅಕ್ಕ ಇದ್ದಂತೆ, ಸಂಘರ್ಷ ಮುಂದುವರಿಸಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸುಮಲತಾ ಅಂಬರೀಶ್ ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ ಎಂದರು.
ಚುನಾವಣೆ ವಿಷಯದಲ್ಲಿ ಒಂದು ಮಾತು ಹೇಳುತ್ತೇನೆ. ಅಂಬರೀಶ್, ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್ಕುಮಾರ್ ಹಾಗೂ ಅಂಬರೀಶ್ ನಿಧನರಾದರು. ರಾಜ್ ಸಮಾಧಿ ಮಾಡಿದ್ದು ನಾನೇ. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ ಗೌರವ ಕೊಟ್ಟೆ. ವಿಷ್ಣುವರ್ಧನ್ ಸಮಾಧಿ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದರು
ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಆತನಿಗೆ ನಮನ ಸಲ್ಲಿಸಬೇಕಾಗಿದ್ದು ನನ್ನ ಕರ್ತವ್ಯ. ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ನಮ್ಮ ಸಮಾಜದ ವ್ಯಕ್ತಿ. ಅಂಬರೀಶ್ಗೆ ಗೌರವ ನೀಡುವ ಮೂಲಕ ಮಂಡ್ಯ ಜನರಿಗೂ ಗೌರವ ನೀಡಿದ್ದೇವೆ. 2019, 2023ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನತೆ ನಮಗೆ ಅನ್ಯಾಯ ಮಾಡಲಿಲ್ಲ. ಮಂಡ್ಯ ಜಿಲ್ಲೆಯ ಮತದಾರ ಬಂಧುಗಳೇ ನಮ್ಮ ತಂದೆ-ತಾಯಿಯಂದಿರು. ರಾಜಕೀಯವಾಗಿ ನಮ್ಮಿಂದ ಸಣ್ಣಪುಟ್ಟ ತಪ್ಪುಗಳಾಗಿರಬಹುದು. ಈ ಜಿಲ್ಲೆಯ ಜನತೆಗೆ ಸ್ಪಷ್ಟ ಮನವಿ ಮಾಡಲು ಬಯಸುತ್ತೇವೆ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ತಪ್ಪು ತಿದ್ದಿಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು