ಬೆಂಗಳೂರು:- ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ಮಾನವ ಕಳ್ಳ ಸಾಗಣೆ ಆರೋಪ ಹಿನ್ನೆಲೆ ದಾಳಿ ನಡೆದಿದೆ.
ದಾಳಿ ವೇಳೆ 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎನ್ನಲಾಗುತ್ತಿದೆ. ಸದ್ಯ ಎಫ್ಐಆರ್ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ.
ಸದ್ಯ ಎನ್ಸಿಪಿಸಿಆರ್ನಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.