ಶಿವಮೊಗ್ಗ:- ಬಿಜೆಪಿ ಟಿಕೆಟ್ ಮಿಸ್ ಹಿನ್ನೆಲೆ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.
ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುವುದಿಲ್ಲ ಎನ್ನುತ್ತಲ್ಲೇ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು.
ಸ್ವತಂತ್ರವಾಗಿ ಸ್ಪರ್ಧಿಸಿ ನಾನು ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಸ್ಪತಂತ್ರವಾಗಿ ನಿರ್ಧರಿಸುವೆ ಎಂದು ಹೇಳಿದರು. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದರು