ಬೆಂಗಳೂರು:-ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ನಿನ್ನೆ ಸಂಜೆ ನಡೆದ ಅಮಿತ್ ಶಾ ಮಾತುಕತೆಯಲ್ಲಿ ಜೆಡಿಎಸ್ ಬಿಜೆಪಿ ಕ್ಷೇತ್ರ ಹಂಚಿಕೆಗೆ ಅಂತಿಮ ಮುದ್ರೆ ಬಿದ್ದಿದೆ.
ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರ ಕೂಡ ಜೆಡಿಎಸ್ಗೆ ಬಿಟ್ಟು ಕೊಡಲು ನಿನ್ನೆಯ ಸಭೆಯಲ್ಲಿ ನಿರ್ಧಾರವಾಗಿದೆ. ನಿಮ್ಮ ಮೂರು ಅಭ್ಯರ್ಥಿಗಳನ್ನ ನೀವೇ ಘೋಷಣೆ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ. ಹಾಸನ, ಮಂಡ್ಯ ಜೊತೆಗೆ ಕೋಲಾರ ಕೂಡ ಜೆಡಿಎಸ್ ಪಾಲಿಗೆ ಸಿಕ್ಕಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತೆ. ಹಾಸನದಿಂದ ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಸಿ.ಎಸ್. ಪುಟ್ಟರಾಜು, ಕೋಲಾರದಿಂದ ಶಾಸಕ ಸಮೃದ್ಧಿ ಮಂಜುನಾಥ್ ಅಥವಾ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ. ಇನ್ನು ಹೆಚ್ಡಿ ಕುಮಾರಸ್ವಾಮಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಮೀಟಿಂಗ್ನಲ್ಲಿ ಅಮಿತ್ ಶಾ ಮತ್ತೆ ಒತ್ತಡ ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ ಶೀಘ್ರದಲ್ಲೇ ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಚಿಕಿತ್ಸೆ ಪಡೆಯಲಿರುವ ಹಿನ್ನೆಲೆ ಮಂಡ್ಯದಿಂದ ಸ್ಪರ್ಧೆ ಮಾಡುವ ಬಗ್ಗೆ ಶಾಗೆ ಯಾವ ನಿರ್ಧಾರವನ್ನೂ ತಿಳಿಸಿಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಗ್ಗೆ ಅಮಿತ್ ಶಾ ಪ್ರಸ್ತಾಪ ಮಾಡಿದ್ದು ಗ್ರಾಮಾಂತರದಲ್ಲಿ ಒಳ್ಳೆಯ ವಾತಾವರಣ ಇದೆ. ಎದುರಾಳಿಗಳು ಡಾ.ಮಂಜುನಾಥ್ ಸೋಲಿಸಲು ಸಾಕಷ್ಟು ಪ್ರಯತ್ನ ಮಾಡುತಿದ್ದಾರೆ.