ಚಿಕ್ಕಮಗಳೂರು: ಬಿಜೆಪಿ ಹಿರಿಯ ನಾಯಕ ಈಶ್ವರಪ್ಪನವರ ಜೊತೆ ಹೈ ಕಮಾಂಡ್ ಮಾತನಾಡುತ್ತೆ. ಈಶ್ವರಪ್ಪ ನಿರ್ಧಾರದಿಂದ ಪಕ್ಷಕ್ಕೆ ಮಾರಕ ಆಗಬಾರದು. ಮೂರು ಸಲ ರಾಜ್ಯ ಬಿಜೆಪಿ ಅಧ್ಯಕ್ಷ, ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದವರು. ದೇಶದಲ್ಲಿ ಒಂದೊಂದು ಸೀಟು ಕೂಡ ಅಮೂಲ್ಯವಾದದ್ದು, ನಾವೆಲ್ಲ ಒಂದಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು,ಈಶ್ವರಪ್ಪ ಅವರಿಗೂ ವಿನಂತಿ ಮಾಡಿಕೊಳ್ಳುತ್ತೇನೆ. ನಿಮ್ಮ ನಿರ್ಣಯ ಪಕ್ಷಕ್ಕೆ ,ದೇಶಕ್ಕೆ ಹಿತವಾಗಿರಬೇಕು. ಅವರ ನಿರ್ಧಾರವನ್ನು ಮರು ಪರಿಶೀಲನೆ ಮಾಡಿಕೊಳ್ಳಬೇಕು. ನಮ್ಮ ಪಕ್ಷದ ವರಿಷ್ಠರು ಈಶ್ವರಪ್ಪ ನವರ ಮನವೊಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಈಶ್ವರಪ್ಪ ಅವರ ನಿರ್ಧಾರದಿಂದ ಪಕ್ಷಕ್ಕೆ ಹಾನಿಯಾಗಬಾರದು. ನಾನು ನನ್ನ ಬಗ್ಗೆ ಮಾತ್ರ ಮಾತನಾಡು ತ್ತೇನೆ. ನಾನು 95 ರ ನಂತರ ಪಕ್ಷದಲ್ಲಿ ಏನನ್ನು ಕೇಳಿ ಪಡೆದಿಲ್ಲ. ಅಭ್ಯರ್ಥಿ ಘೋಷಣೆಯಾಗಿದೆ. ನಾನೇ ಅವರು ಅವರೇ ನಾನು ಎಂದು ಕೆಲಸ ಮಾಡುತ್ತೇನೆ. ಪಕ್ಷವನ್ನು ಗೆಲ್ಲಿಸಲು ಎಲ್ಲಾ ಪ್ರಯತ್ನ ಮಾಡುತ್ತೇನೆ.
ಯಾರು ಸ್ವಾರ್ಥದ ರಾಜಕಾರಣ ಮಾಡುತ್ತಾರೆ. ಅವರು ಪಕ್ಷವನ್ನ ಬಲಿಕೊಡುವ ಕೆಲಸ ಮಾಡುತ್ತಾರೆ. ನಾನು ಪಕ್ಷ ಹಿತಕ್ಕಾಗಿ ರಾಜಕಾರಣ ಮಾಡಿದ್ದೇನೆ. ನಮಗೆ ಅವಕಾಶ ಸಿಕ್ಕಾಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೂ ಪಕ್ಷ ಬಲ ಪಡಿಸುವ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.