ಶಿವಮೊಗ್ಗ: ನಾನು ಮೋದಿ ಪರ ಧ್ವನಿ ಎತ್ತುತ್ತೇನೆ. ಆದರೆ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಮೋದಿ ಪರ ಧ್ವನಿ ಎತ್ತುತ್ತೇನೆ. ಆದರೆ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಖಚಿತಪಡಿಸಿದ್ದಾರೆ. ಅಲ್ಲದೆ, ಇಂದು ಆರಗ ಜ್ಞಾನೇಂದ್ರ ಹಾಗೂ ಕೆಲವರು ನಿವಾಸಕ್ಕೆ ಬಂದಿದ್ದರು. ಆದರೆ ಯಾವುದೇ ಕಾರಣಕ್ಕೂ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.
ನನ್ನ ಮಗನಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಸ್ಪರ್ಧಿಸುತ್ತಿಲ್ಲ. ಪಕ್ಷದಲ್ಲಿ ಅನೇಕ ಹಿಂದುತ್ವವಾದಿಗಳಿಗೆ ಮೋಸವಾಗಿದೆ. ಯಡಿಯೂರಪ್ಪ ಕುಟುಂಬದ ಹಿಡಿತದಲ್ಲಿ ಬಿಜೆಪಿ ಸಿಲುಕಿದೆ. ರಾಜ್ಯಾಧ್ಯಕ್ಷರು ಲಿಂಗಾಯತರೇ ಬೇಕು ಅಂದಿದ್ದರೆ ಯತ್ನಾಳ್ ಅವರನ್ನು ಮಾಡಬೇಕಿತ್ತು. ಯತ್ನಾಳ್ ಅವರನ್ನ ಯಾಕೆ ಮಾಡಲಿಲ್ಲ? ಲಿಂಗಾಯತರು ಬೆಳೆಯುವುದು ಇವರಿಗೆ ಇಷ್ಟವಿಲ್ಲ ಓಕೆ.
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಒಕ್ಕಲಿಗ ನಾಯಕರನ್ನಾದರೂ ಮಾಡಬಹುದಿತ್ತು. ಯಾಕೆ ಮಾಡಿಲ್ಲ ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದರು ಸ್ಥಳೀಯರಿಗೆ ಟಿಕೆಟ್ ಕೊಡಿ ಅಂತ ನಾಯಕರು ಮನವಿ ಮಾಡಲಿದ್ದಾರೆ. ಇಂದು ಮಧ್ಯಾಹ್ನ ಒಂದು ಬಾರಿ ಸಭೆ ಸೇರಿ ಫೈನಲ್ ಮಾಡಲು ತೀರ್ಮಾನಿಸಿದ್ದಾರೆ. ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡಿದರೆ ಪರಿಣಾಮ ಬೇರೆ ಆಗುತ್ತದೆ. ಅಸಮಾಧಾನ ಭುಗಿಲೇಳುತ್ತೆ ಎಂದು ಕೇಂದ್ರ ನಾಯಕರಿಗೆ ಮನವರಿಕೆ ಮಾಡಲಿದ್ದಾರೆ.