ಮಂಡ್ಯ: ಯಾರೋ ಒಬ್ಬರ ಮಾತು ಕೇಳಿ ನಮ್ಮ ಪಕ್ಷದಲ್ಲಿ ಟಿಕೆಟ್ ಕೊಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ‘ಎಲ್ಲದಕ್ಕೂ ಕ್ಷೇತ್ರದ ಜನ ಮತ್ತು ರಾಜ್ಯದ ಜನ ಉತ್ತರ ಕೊಡುತ್ತಾರೆ. ನಾನು ಹೆಚ್ಚಿಗೆ ಮಾತಾಡಲು ಇಷ್ಟ ಪಡಲ್ಲ. ಈಶ್ವರಪ್ಪ ಅವರು ನಮ್ಮ ಪಕ್ಷದ ಹಿರಿಯರು, ಅವರ ಜೊತೆ ಮಾತಾಡ್ತೇವೆ. ಅವರು ನೋವಿನಲ್ಲಿ ಇದ್ದಾರೆ,
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿದೆ ಎಂದರು. ಇನ್ನು ಯಾರೋ ಒಬ್ಬರ ಮಾತು ಕೇಳಿ ನಮ್ಮ ಪಕ್ಷದಲ್ಲಿ ಟಿಕೆಟ್ ಕೊಡಲ್ಲ, ಕೇಂದ್ರದ ವರಿಷ್ಠರು ಎಲ್ಲರೂ ಕೂತು ಚರ್ಚೆ ಮಾಡಿ ಟಿಕೆಟ್ ಕೊಟ್ಟಿದ್ದಾರೆ. ಎಲ್ಲರ ಒಮ್ಮತದ ತೀರ್ಮಾನದಿಂದ ಅಭ್ಯರ್ಥಿ ಘೋಷಣೆ ಆಗಿದೆ. ಒಬ್ಬರ ತೀರ್ಮಾನದಿಂದ ಅಭ್ಯರ್ಥಿಗಳ ಆಯ್ಕೆ ಆಗಿಲ್ಲ ಎಂದು ಈಶ್ವರಪ್ಪ ಆರೋಪಗಳಿಗೆ ಪ್ರತ್ಯುತ್ತರ ನೀಡಿದರು.