ಚಿಕ್ಕಬಳ್ಳಾಪುರ:- ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ.
ದೇವಪ್ಪ ಮೃತ ರ್ದುದೈವಿ ಎನ್ನಲಾಗಿದೆ. ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವಾಗ ಈ ದುರಂತ ನಡೆದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇನ್ನು ಕಳೆದ ಫೆ.17 ರಂದು ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸುರೇಶ್ (38) ಎಂಬ ಯುವಕನೋರ್ವ ಬಲಿಯಾದ ಘಟನೆ ನಡೆದಿತ್ತು. ಮತ್ತೋರ್ವ ಲೈನ್ಮನ್ ನಿಂಗಪ್ಪನಿಗೆ ಗಂಭಿರ ಗಾಯವಾಗಿದ್ದು, ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿದ್ಯುತ್ ಖಡಿತಗೊಳಿಸಿ ಇಬ್ಬರು ಯುವಕರು ಹೊಸ ಲೈನ್ ಎಳೆಯುವ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಸಿಬ್ಬಂದಿ ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದಾನೆ ಈ ವೇಳೆ ಅವಘಡ ಸಂಭವಿಸಿದೆ.