ಮಹಿಳಾ ಪ್ರೀಮಿಯರ್ ಲೀಗ್ 2024 ರ ಅಂತಿಮ ಪಂದ್ಯ ದೆಹಲಿ ಮತ್ತು ಬೆಂಗಳೂರು ನಡುವೆ ನಡೆಯುತ್ತಿದ್ದು, ಇಲ್ಲಿಯವರೆಗೆ ಈ ಎರಡೂ ತಂಡಗಳು ಐಪಿಎಲ್ ಟ್ರೋಫಿ ಅಥವಾ ಡಬ್ಲ್ಯುಪಿಎಲ್ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಈ ಸೀಸನ್ನಲ್ಲಿ ಚಾಂಪಿಯನ್ ಆಗುವ ತಂಡಕ್ಕೆ ಇದು ಚೊಚ್ಚಲ ಟ್ರೋಫಿ ಆಗಲಿದೆ.ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಡೆಲ್ಲಿ ನಾಯಕಿ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಎಲಿಮಿನೇಟರ್ ಪಂಡ್ಯ ಆಡಿದ್ದ ಬೆಂಗಳೂರು ತಂಡ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಈ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಅಂದರೆ ಆರ್ಸಿಬಿ ತಂಡ ಡೆಲ್ಲಿ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾದ್ಯವಾಗಿಲ್ಲ.
ಇನ್ನು ಈ ಸೀಸನ್ನಲ್ಲಿ ಉಭಯ ತಂಡಗಳು ನಡುವೆ ಎರಡು ಪಂದ್ಯಗಳು ನಡೆದಿವೆ. ಮೊದಲ ಪಂದ್ಯದಲ್ಲಿ ದೆಹಲಿ ತಂಡ ಬೆಂಗಳೂರು ತಂಡವನ್ನು 25 ರನ್ಗಳಿಂದ ಸೋಲಿಸಿತ್ತು. ಎರಡನೇ ಪಂದ್ಯದಲ್ಲಿ ಆರ್ಸಿಬಿ ಕೇವಲ ಒಂದು ರನ್ಗಳಿಂದ ವಿರೋಚಿತ ಸೋಲು ಕಂಡಿತ್ತು. ಹೀಗಾಗಿ ಆರ್ಸಿಬಿ ಈಗ ಚಾಂಪಿಯನ್ ಪಟ್ಟಕ್ಕೇರಬೇಕಾದರೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಲೇಬೇಕಾಗಿದೆ.