ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳಿಸೈ ಸೌಂದರರಾಜನ್ ಸೋಮವಾರ ಬೆಳಿಗ್ಗೆ ಏಕಾಏಕಿ ಎರಡೂ ರಾಜ್ಯಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಕಾರಣಕ್ಕೆ ಅವರು ರಾಜ್ಯಪಾಲ ಹುದ್ದೆಯನ್ನು ತೊರೆದಿದ್ದಾರೆ ಎನ್ನಲಾಗಿದೆ.
ತೆಲಂಗಾಣ ರಾಜ್ಯಪಾಲರಾಗಿ ನೇಮಕವಾಗುವ ಮೊದಲು ತಮಿಳುಸೈ ಸೌಂದರರಾಜನ್ ಅವರು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆಯಾಗಿದ್ದರು. ಇದೀಗ ಮತ್ತೆ ಅವರು ಸಕ್ರಿಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. 62 ವರ್ಷದ ತಮಿಳುಸೈ ಸೌಂದರರಾಜನ್ ಅವರನ್ನು 2019ರ ನವೆಂಬರ್ನಲ್ಲಿ ತೆಲಂಗಾಣದ ಎರಡನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದರು.
Karnataka Jobs Alert: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ʼನ್ಯೂಸ್! 247 PDO ಹುದ್ದೆಗಳಿಗೆ ಅರ್ಜಿ ಆಹ್ವಾನ
ನಂತರ ಫೆಬ್ರವರಿ 2021ರಲ್ಲಿ ಅವರಿಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿತ್ತು. ತಮಿಳುಸೈ ಸೌಂದರರಾಜನ್ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳಬಹುದು ಎನ್ನಲಾಗಿದೆ. ಹಾಗೂ ಅವರು ಪ್ರಸ್ತುತ ಆಡಳಿತಾರೂಢ ಡಿಎಂಕೆಯ ಕನಿಮೋಳಿ ಪ್ರತಿನಿಧಿಸುತ್ತಿರುವ ತೂತುಕುಡಿ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂದು ಹೇಳಲಾಗುತ್ತಿದೆ. ಇದಲ್ಲದೆ ತಮಿಳುನಾಡಿನ ಇನ್ನೂ ಎರಡು ಕ್ಷೇತ್ರಗಳಲ್ಲಿ ಅವರು ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಇವುಗಳಲ್ಲಿ ಒಂದು ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ.