ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.
ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೋ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯಿತು. ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಕ್ಷೇತ್ರಗಳಲ್ಲೂ ಅವರಿಗೆ ಟಿಕೆಟ್ ನೀಡಲಿಲ್ಲ ಎಂದರು.
ಈಗ ಅವರ ಹೆಸರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದ್ರೆ ಶೆಟ್ಟರ್ಗೆ ಆಗದ ಕೆಲವರು ಕುತಂತ್ರ ಮಾಡಿ ವ್ಯವಸ್ಥಿತವಾಗಿ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿದೆ. ಬಿಜೆಪಿ ವರಿಷ್ಠರು ಅವರ ಕುತಂತ್ರಕ್ಕೆ ಒಳಗಾದಗೆ ಶೆಟ್ಟರ್ಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದೆ ಹೋದ್ರೆ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಿ, ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶೇಖರ ಕವಳಿ, ರಾಜಶೇಖರ ಉಪ್ಪಿನ, ಪರಮೇಶ್ವರ ನಿಗದಿ ಮುಂತಾದವರಿದ್ದರು