ಬೆಂಗಳೂರು:- ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಆದೇಶ ಹಿನ್ನೆಲೆ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಹೇಳಿದೆ.
ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು ಎಂದು ಹೈಕೋರ್ಟ್ ಹೇಳಿದೆ.
ಶೇಕಡಾ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು ಮಳಿಗೆಗಳ ಸಂಘದ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಪ್ರಶ್ನೆ ಮಾಡಿದ್ದು, ‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ಜಾರಿ ಸಮರ್ಪಕವಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸಲು ಕಾಲಾವಕಾಶ ಬೇಕು. ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿಲ್ಲದಿದ್ದರೆ ಮುಚ್ಚಲಾಗುತ್ತಿದೆ ಎಂದು ಸರ್ಕಾರದ ಸುತ್ತೋಲೆ ಪ್ರಶ್ನಿಸಿ ವ್ಯಾಪಾರಿಗಳ ಸಂಘದಿಂದ ವಾದ ಮಾಡಲಾಗಿದೆ.‘
ಕಾಯ್ದೆ ಜಾರಿ ಬಗ್ಗೆ ಗೆಜೆಟ್ ಆಧಿಸೂಚನೆ ವಿವರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚನೆ ನೀಡಿದೆ.