ಆನೇಕಲ್:– ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ.
ವಿಶಾಲ್ ಕುಮಾರ್ ಸಹಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 13ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನೀಲಂ ಕುಮಾರಿಯನ್ನು 2023ರ ಫೆಬ್ರವರಿ ತಿಂಗಳಲ್ಲಿ ಬಿಹಾರದಲ್ಲಿ ವಿಶಾಲ್ ಕುಮಾರ್ ಸಹಾನಿ ಬಾಲ್ಯವಿವಾಹವಾಗಿದ್ದ. 1 ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದು, ಯಶವಂತಪುರದಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದ.
20 ದಿನಗಳ ಹಿಂದೆ ಬಿಹಾರದಿಂದ ಬಾಲಕಿಯನ್ನು ಕರೆತಂದಿದ್ದ. ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಬಾಲ್ಯವಿವಾಹವಾಗಿ ಲೈಂಗಿಕವಾಗಿ ಬಳಸಿಕೊಂಡು ಮಾನಸಿಕ ಹಿಂಸೆ ಹಿನ್ನೆಲೆ ಮಾ.13ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.