ಬೆಂಗಳೂರು:- ಮುಂದಿನ ಎರಡು ದಿನಗಳ ಕಾಲ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಡಿಕೇರಿ ತಾಲೂಕಿನ ಚೈಯ್ಯಂಡಾಣೆ, ಕುಂಜಿಲಗೇರಿ, ಬೆಳ್ಳುಮಾಡು ವ್ಯಾಪ್ತಿಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ.
ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ. ಕರಾವಳಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಾಗ್ಯೂ, ಗುಡುಗು, ಭಾರೀ ಮಳೆ ಇಲ್ಲ ಎಂದು ವರದಿಯಲ್ಲಿ ತಿಳಿಸಿದೆ.