ಚಿಕ್ಕಮಗಳೂರು:- ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದೇವರು ಮನೆ ಬೆಟ್ಟದಲ್ಲಿ ಕಾಡಾನೆ ರಸ್ತೆಗೆ ಅಡ್ಡ ಬಂದಿರುವ ಘಟನೆ ನಡೆದಿದೆ.
ಬೈಕ್ ನಲ್ಲಿದ್ದ ಯುವಕ ಯುವತಿ ಕೂದಲೆಳದ ಅಂತರದಿಂದ ಪಾರಾಗಿದ್ದು ಬೈಕ್ ಸಂಪೂರ್ಣ ಜಕಮ್ ಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ ದೇವರಮನೆ ರಸ್ತೆಯಲ್ಲಿ ಕಾಡಾನೆ ಬೈಕಿಗೆ ಅಡ್ಡ ಬಂದು ಅಟ್ಟಿಸಿಕೊಂಡು ಬಂದಿದೆ.
ತಕ್ಷಣ ಬೈಕ್ ಸವಾರರು ಓಡಿ ಹೋಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಬೈಕ್ ಜಖಂಗೊAಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಅಭಿಜಿತ್, ಬಣಕಲ್ ಠಾಣಾ ಪಿಎಸ್ಐ ಎನ್.ಕೆ.ಓಮನಾ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಪ್ರವಾಸಿಗರಿಗೂ ಸಹ ಭಯ ಉಂಟು ಮಾಡುತ್ತಿದೆ ಸದ್ಯ ಈ ಕುರಿತು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ