ಬೆಂಗಳೂರು: ಜೆಡಿಎಸ್ ಅಸಮಾಧಾನ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯದ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಜೆಡಿಎಸ್ಗೆ ಸಮಾಧಾನ ಆಗುವಂಥ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಸಮಾಧಾನದ ಬಗ್ಗೆ ನಾವು ನೀವು ಮಾತಾಡುವುದು ತಪ್ಪು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಜೆಡಿಎಸ್ ಮತ್ತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಹಾಗೆ ಈಗಿನ ಗೊಂದಲಗಳೆಲ್ಲವೂ ಸುಖಾಂತ್ಯ ಕಾಣಲಿದೆ ಎಂದರು.
ಕಾಂಗ್ರೆಸ್ ನಾಯಕರಿಗೆ ಅವರ ನಾಯಕರಿಗಿಂತ ನಮ್ಮ ಪಕ್ಷದ ನಾಯಕರ ಮೇಲೆಯೇ ಪ್ರೀತಿ ಹೆಚ್ಚಾಗಿದೆ. ಕಳೆದೊಂದು ವಾರದ ಎಂಬಿ ಪಾಟೀಲ್ ಹಾಗೂ ಇತರ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಂತಿದೆ. ಸದಾನಂದ ಗೌಡ ಪಕ್ಷ ಬಿಡಲ್ಲ, ಬಿಜೆಪಿಯಲ್ಲೇ ಇರುತ್ತಾರೆ ಎಂದು ವಿಜಯೇಂದ್ರ ತಿಳಿಸಿದರು.
ವರದಿ: ಶಾಲಿನಿ ಗೌಡ
AIN ನ್ಯೂಸ್ ಬೆಂಗಳೂರು