ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಿಂದ DVS ಕಣಕ್ಕಿಳಿಸಲು ಹೈಕಮಾಂಡ್ ನಿರ್ಧಾರ ಮಾಡಿದೆ ಎನ್ನಲಾ ಗುತ್ತಿದೆ. ಹೌದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನ ಗೊಂಡಿರುವ ಡಿವಿ ಸದಾನಂದಗೌಡ ಅವರು ಬಿಜೆಪಿ ಮಾಸ್ಟರ್ ಸ್ಟ್ರೋಕ್ ಕೊಡುವ ಸಾಧ್ಯತೆ ಇದೆ. ಈ ನಡುವೆ ಸದಾನಂದಗೌಡರನ್ನು ದೂರವಾಣಿ ಕರೆ ಮೂಲಕ ಸಂಪರ್ಕಿಸಿದ ಬಿಜೆಪಿ ಹೈಕಮಾಂಡ್,
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಫರ್ ಕೊಟ್ಟು ಮುನಿಸು ಶಮನಗೊಳಿಸುವ ಪ್ರಯತ್ನ ಮಾಡಿದೆ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಬಗ್ಗೆ ಹೈಕಮಾಂಡ್ ಆಫರ್ ನೀಡಿದ್ದರೂ ಸದಾನಂದಗೌಡ ಅವರು ಸಹಮತ ಸೂಚಿಸಿಲ್ಲ. ಇನ್ನೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಗೆ ತೆರಳುವ ಮುನ್ನ ಸದಾನಂದಗೌಡರ ಜೊತೆ ದೂರವಾಣಿ ಮೂಲಕ ಮಾತನಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳು ಪ್ರಯತ್ನ ನಡೆಸಿದರು.
ವರಿಷ್ಠರ ಜೊತೆ ಚರ್ಚೆ ನಡೆಸುವ ಬಗ್ಗೆ ಸದಾನಂದಗೌಡರಿಗೆ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ. ಈ ಹಿಂದೆ ಆಪ್ತರನ್ನು ಕಳುಹಿಸಿ ಮನವೊಲಿಕೆ ಮಾಡುವ ಯತ್ನ ವಿಜಯೇಂದ್ರ ನಡೆಸಿದ್ದರು. ಒಂದು ಕಡೆ, ಬೆಳಗ್ಗೆ ವರಿಷ್ಠರ ಕರೆ ಹಿನ್ನೆಲೆ ಸದಾನಂದಗೌಡ ಅವರು ಸುದ್ದಿಗೋಷ್ಠಿ ಮುಂದೂಡಿದರೆ, ಇನ್ನೊಂದೆಡೆ, ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷವು ಸದಾನಂದಗೌಡರನ್ನು ಸಂಪರ್ಕಿಸುತ್ತಿದೆ. ಪಕ್ಷಕ್ಕೆ ಸೇಳೆಯುವ ಪ್ರಯತ್ನ ನಡೆಸುತ್ತಿದೆ.