ಬೆಂಗಳೂರು : 2023-2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
Sucide Case: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್ ಟ್ವಿಸ್ಟ್: ಕೇಳಿದ್ರೆ ಶಾಕ್ ಆಗ್ತೀರಾ?
ಮಂಡಳಿಯ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು, ಮಾದರಿ ಉತ್ತರಗಳನ್ನು ಪಡೆಯಬಹುದಾಗಿದೆ. ಮಾರ್ಚ್ 1ರಂದು ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ-1, ಮಾರ್ಚ್ 22ಕ್ಕೆ ಮುಕ್ತಾಯವಾಗಲಿದೆ. ಸದ್ಯ ಮಾ.1ರಿಂದ 18ರವರೆಗೆ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಮಾತ್ರ ಪ್ರಕಟಿಸಿದ್ದು, ಮಾ.20ರಿಂದ 22ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಮಂಡಲಿ ತಿಳಿಸಿದೆ.
Lok Sabha Election: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ: ಐವರು ಮಹಿಳೆಯರಿಗೂ ಟಿಕೆಟ್ ಸಿಗುವ ಸಾಧ್ಯತೆ
ಆಕ್ಷೇಪಣೆ ಸಲ್ಲಿಕೆಗೆ ಮಾರ್ಚ್ 21 ಕೊನೇ ದಿನವಾಗಿದೆ. ಆನ್ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 19ರಿಂದ 21ರ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಮಾ.21ರ ಸಂಜೆ 5 ಗಂಟೆ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.