ಕೋಲಾರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,50,250ಲಕ್ಷ ರೂಪಾಯಿ ಹಣ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹಕ್ಕಿಪಿಕ್ಕಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಶಿಡ್ಲಘಟ್ಟ ಮೂಲದ ಗೋಪಾಲ ಎಂಬುವರಿಗೆ ಸೇರಿದ ಹಣ ಹಾಗೂ ದ್ವಿಚಕ್ರ ವಾಹನವಾಗಿದ್ದು, ಆಂದ್ರದಲ್ಲೂ ವಿಧಾನಸಭೆ ಚುನಾವಣೆ ಹಿನ್ನಲೆ ಕಟ್ಟುನಿಟ್ಟಿನ ತಪಾಸಣೆ ಮಾಡುತ್ತದ್ದಾರೆ.
ಮದನಪಲ್ಲಿ ಯಿಂದ ಶಿಡ್ಲಘಟ್ಟ ತಾಲ್ಲೂಕಿನ ಬುಡಗವಾರಪಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದ ಹಣವಾಗಿದ್ದು, ಇನ್ಸ್ಪೆಕ್ಟರ್ ಜಯಾನಂದ್ ನೇತೃತ್ವದಲ್ಲಿ ತಪಾಸಣೆ ನಡೆಸಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.