ನವದೆಹಲಿ:- ಇಶಾ ಫೌಂಡೇಶನ್ನ ಸಂಸ್ಥಾಪಕ, ಸದ್ಗುರು ಜಗ್ಗಿ ವಾಸುದೇವ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಗುರು ಮೆದುಳಿನಲ್ಲಿ ಭಾರೀ ಊತ ರಕ್ತಸ್ರಾವ ಉಂಟಾಗಿದ್ದು, ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಜಗ್ಗಿ ವಾಸುದೇವ್ ಅವರಿಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಇಶಾ ಫೌಂಡೇಶನ್ ಸಾಮಾಜಿಕ ಜಾಲತಾಣದ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.
ತೀವ್ರ ತಲೆನೋವಿನಿಂದ ಆಸ್ಪತ್ರೆಗೆ ದಾಖಲಾಗುವ ಮೊದಲು ಸದ್ಗುರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವನ್ನು ಅನುಭವಿಸಿದರು ಎಂದು ಹೇಳಿಕೆ ತಿಳಿಸಿದೆ. ಮಾರ್ಚ್ 17 ರಂದು ರಕ್ತಸ್ರಾವವನ್ನು ನಿವಾರಿಸಲು ಅಪೋಲೋ ಆಸ್ಪತ್ರೆಯಲ್ಲಿ ತಲೆಬುರುಡೆ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ.
”ತೀವ್ರ ತಲೆನೋವಿನ ಹೊರತಾಗಿಯೂ ಸದ್ಗುರುಗಳು ತಮ್ಮ ಕಾರ್ಯಕ್ರಮಗಳನ್ನು ಮುಂದುವರೆಸಿದರು.ಮಾರ್ಚ್ 17 ರಂದು, ಸ್ಥಿತಿಯು ತೀವ್ರವಾಗಿ ಹದಗೆಟ್ಟಿತು, ತೀವ್ರ ವಾಂತಿಯೊಂದಿಗೆ ತಲೆನೋವು ಉಲ್ಬಣಗೊಂಡಿತು. ತಲೆಬುರುಡೆಯಲ್ಲಿನ ರಕ್ತಸ್ರಾವವ ನಿಲ್ಲಿಸಲು ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದರು”ಎಂದು ಇಶಾ ಫೌಂಡೇಶನ್ ಹೇಳಿದೆ
ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ ವಿನಿತ್ ಸೂರಿ, ಸದ್ಗುರುಗಳು ಸ್ಥಿರವಾದ ಪ್ರಗತಿಯನ್ನು ತೋರಿಸಿದ್ದಾರೆ ಮತ್ತು ಅವರ ಮೆದುಳು, ದೇಹ ಮತ್ತು ಪ್ರಮುಖ ನಿಯತಾಂಕಗಳು ಸಾಮಾನ್ಯ ಮಟ್ಟಕ್ಕೆ ಸುಧಾರಿಸಿದೆ ಎಂದು ಹೇಳಿದ್ದಾರೆ.