ಶರಣ್, ಆಶಿಕಾ ರಂಗನಾಥ್ ಕಾಂಬಿನೇಷನ್ ನ ಅವತಾರ ಪುರುಷ ಸಿನಿಮಾದ ರಿಲೀಸ್ ಡೇಟ್ ಮುಂದೂಡಲಾಗಿದೆ. ಐಪಿಎಲ್ ಕ್ರಿಕೆಟ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ರಿಲೀಸ್ ಡೇಟ್ ಮುಂದೂಡಲಾಗಿದ್ದು, ಹೊಸ ರಿಲೀಸ್ ಡೇಟ್ ಅನ್ನು ಚಿತ್ರತಂಡ ಅನೌನ್ಸ್ ಮಾಡಿದೆ.
‘ಅವತಾರ ಪುರುಷ’ 2ನೇ ಭಾಗ ಇದೇ ಮಾರ್ಚ್ 22ರಂದು ರಾಜ್ಯಾದ್ಯಂತ ತೆರೆಗೆ ಬರಲು ರೆಡಿಯಾಗಿತ್ತು. ಆದರೆ ಮಾರ್ಚ್ 22ರಿಂದ ಐಪಿಎಲ್ ಪಂದ್ಯ ಪ್ರಾರಂಭವಾಗುತ್ತಿದೆ. ಈ ವೇಳೆ ಸಿನಿಮಾ ರಿಲೀಸ್ ಮಾಡಿದರೆ ಹೊಡೆತ ಬೀಳಲಿದೆ ಎಂಬ ಕಾರಣಕ್ಕೆ ಇದೀಗ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಸದ್ಯ ಚಿತ್ರ ಏಪ್ರಿಲ್ 5ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.
ನಟ ಶರಣ್- ನಟಿ ಆಶಿಕಾ ರಂಗನಾಥ್ ಜೋಡಿ, ಮತ್ತೆ ಶ್ರೀನಗರ ಕಿಟ್ಟಿಯ ಮಂತ್ರವಾದಿಯ ಪಾತ್ರ ಈ ಚಿತ್ರದಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಶ್ರೀನಗರ ಕಿಟ್ಟಿ ಪಾತ್ರ ಮೊದಲ ಭಾಗಕ್ಕಿಂತ ಅವತಾರ ಪುರುಷ ಎರಡನೇ ಭಾಗದಲ್ಲಿ ಇನ್ನಷ್ಟು ಭಯಂಕರವಾಗಿಯೇ ಮೂಡಿ ಬಂದಿದೆ. ಈ ಸಿನಿಮಾದ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ‘ಅವತಾರ ಪುರುಷ’ ಮೊದಲ ಭಾಗವನ್ನು ಇಷ್ಟಪಟ್ಟಂತೆ ಎರಡನೇ ಭಾಗವನ್ನು ನೋಡಲು ಜನ ತುದಿಗಾಲಲ್ಲಿ ನಿಂತಿದ್ದಾರೆ.