ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಳೆಹಳ್ಳಿ ಗ್ರಾಮದಲ್ಲಿ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಭಸ್ಮವಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಗ್ರಾಮದ ಜಿ ಎಚ್ ಅಣ್ಣಪ್ಪ ಇಪ್ಪತ್ತು ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಆಗಿದ್ದು,
ಬರಗಾಲ ಹಿನ್ನಲೆ ಹುಲ್ಲಿನ ಗೋಡೌನ್ ನಲ್ಲಿ ಸಂಗ್ರಹಿಸಿಟ್ಟಿದ್ದರು. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಇನ್ನೂ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.