ಗದಗ: ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಕೊಡಗಾನೂರು ಕ್ರಾಸ್ ಬಳಿ ಎದುರಿಗೆ ಬರುತ್ತಿದ್ದ ಬಸ್ಗೆ ಸೈಡ್ ಕೊಡಲು ಹೋಗಿ ಮತ್ತೊಂದು ಸಾರಿಗೆ ಬಸ್ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಏಕಾಏಕಿ ಬಸ್ ಕಂದಕ್ಕೆ ಉರುಳಿದ ಪರಿಣಾಮ ಸುಮಾರು 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಗಜೇಂದ್ರಗಡದಿಂದ ಗದಗ ಕಡೆಗೆ ಬಸ್ ಹೊರಟಿತ್ತು.
ಇದೇ ವೇಳೆ ಗದಗನಿಂದ ಬರುತ್ತಿದ್ದ ಮತ್ತೊಂದು ಬಸ್ಗೆ ದಾರಿ ಬಿಡುವಾಗ ಆಯತಪ್ಪಿ ಕಂದಕಕ್ಕೆ ಬಿದ್ದಿದೆ. ಬಸ್ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಪ್ರಯಾಣಿಕರಿಗೆ ಮತ್ತೊಂದು ಬಸ್ ಮೂಲಕ ತೆರಳಲು ವ್ಯವಸ್ಥೆ ಮಾಡ ಲಾಯಿತು. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.