ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದರು. ಇಂದು ಬೆಳಗ್ಗೆ ಅವರ ಶಸ್ತ್ರ ಚಿಕಿತ್ಸೆ ನಡೆದಿದ್ದು, ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಯಶಸ್ವಿಯಾಗಿ 3 ನೇ ಬಾರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಲೋಕಸಭೆ ಟಿಕೆಟ್ ತಪ್ಪಿದ್ದರ ಹಿಂದೆ ಕಾಣದ ಕೈ ಯಾರೆಂದು ನನಗೆ ಗೊತ್ತಿದೆ: ಸದಾನಂದಗೌಡ ಕಿಡಿ!
ದೇವೇಗೌಡ, ಚನ್ನಮ್ಮ ಅವರ ಆಶೀರ್ವಾದ ಹಾಗೂ ಅಭಿಮಾನಿಗಳ ಪ್ರಾರ್ಥನೆಯಿಂದ ಹೆಚ್ಡಿಕೆ ಆಪರೇಷನ್ ಯಶಸ್ವಿಯಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಕುಮಾರಣ್ಣ ವಾಪಸ್ ಆಗಲಿದ್ದಾರೆ. ಮಾರ್ಚ್ 25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ.
ಮಾರ್ಚ್ 19ರಂದು ಹೆಚ್ಡಿಕೆ ಚೆನ್ನೈ ತೆರಳುತ್ತಿದ್ದರು. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗಿದ್ದರು. ತಪಾಸನೆ ಬಳಿಕ ಇಂದು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಅದರಂತೆ ಇಂದು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.