ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಟಿಕೆಟ್ ಲಾಭಿಗಳು ಎಷ್ಟು ಜೋರಾಗಿವೆ ಹಾಗೆ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹಾರುವ ಸಂಖ್ಯೆ ಕೂಡ ಹೆಚ್ಚಾಗಿದ್ದು ಈಗ ಮಂಡ್ಯದಲ್ಲಿ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಬಿಗ್ ಆಪರೇಷನ್ ನಡೆಸಿದ್ದು ಜೆಡಿಎಸ್ ನಾಯಕರು ಕಾಂಗ್ರೆಸ್ʼಗೆ ಜಂಪ್ ಆಗಿದ್ದಾರೆ.
ಹೌದು… ಪರಿಷತ್ ಸದಸ್ಯ ಮರಿತಿಬ್ಬೇಗೌಡ್ರು,ಮಾಜಿ ಪರಿಷತ್ ಸದಸ್ಯ ಅಪ್ಪಾಜಿಗೌಡ,ಮಂಡ್ಯ ಮಾಜಿ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಅಳಿಯ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್,ಮಂಡ್ಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ,ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ ಗಣಿಗ,ಮಂಡ್ಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ಮಂಡ್ಯ ಮಾಜಿ ಶಾಸಕ ಎಂ ಶ್ರೀನಿವಾಸ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಅನಾರೋಗ್ಯ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲು ಆಗಿದ್ದಾರೆ ಇಲ್ಲಿಂದಲ್ಲೇ ಎಂ ಶ್ರೀನಿವಾಸ್ ಅವ್ರನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇನೆ ಆಸ್ಪತ್ರೆಗೆ ಹೋಗಿ ನಾನು ಭೇಟಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.