ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ MS ಧೋನಿ ವಿಶೇಷ ದಾಖಲೆ ಬರೆದಿದ್ದಾರೆ.
ಅದು ಕೂಡ ಅದ್ಭುತ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಭರ್ಜರಿ ಬೌಲಿಂಗ್ ದಾಳಿ ಸಂಘಟಿಸಿದ ಸಿಎಸ್ಕೆ ಬೌಲರ್ಗಳು ಆರ್ಸಿಬಿ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಕರಾರುವಾಕ್ ದಾಳಿ ಸಂಘಟಿಸಿದ ಮುಸ್ತಫಿಜುರ್ ರೆಹಮಾನ್ 4 ವಿಕೆಟ್ ಕಬಳಿಸಿ ಮಿಂಚಿದರು. ಇದರಲ್ಲಿ 2 ವಿಕೆಟ್ಗಳು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಹಿಡಿದ ಕ್ಯಾಚ್ನಿಂದ ಮೂಡಿಬಂದಿದ್ದವು.
ಇನ್ನು ಆರ್ಸಿಬಿ ತಂಡದ ಇನಿಂಗ್ಸ್ನ ಕೊನೆಯ ಎಸೆತದಲ್ಲಿ ಅನೂಜ್ ರಾವತ್ ಅವರನ್ನು ಮಹೇಂದ್ರ ಸಿಂಗ್ ಧೋನಿ ರನೌಟ್ ಮಾಡಿದ್ದರು. ಈ ರನೌಟ್ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನೌಟ್ ಮಾಡಿದ ಆಟಗಾರ ಎಂಬ ದಾಖಲೆ ಧೋನಿ ಪಾಲಾಗಿದೆ
ಇದಕ್ಕೂ ಮುನ್ನ ಈ ಅಪರೂಪದ ದಾಖಲೆ ರವೀಂದ್ರ ಜಡೇಜಾ ಅವರ ಹೆಸರಿನಲ್ಲಿತ್ತು.