ಗದಗ: ಗದಗ ತಾಲೂಕಿನ ಹಂಗನಕಟ್ಟಿ ಗ್ರಾಮದಲ್ಲಿ ಮಕ್ಕಳಲ್ಲಿ ಡೆಂಗ್ಯೂ ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಕಂಗಾಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಸ್ಥಿತಿ ಕಂಡು ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಹಂಗನಕಟ್ಟಿ ಗ್ರಾಮ ಒಂದರಲ್ಲೇ 4 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.
ತೀವ್ರ ಜ್ವರ, ವಾಂತಿಯಿಂದ 18ಕ್ಕೂ ಹೆಚ್ಚು ಮಕ್ಕಳು ಬಳಲುತ್ತಿದ್ದಾರೆ. ಜ್ವರದಿಂದ ಬಳಲುತ್ತಿರೋ ಮಕ್ಕಳ ಸಂಖ್ಯೆ ನಿತ್ಯವೂ ಏರುತ್ತಿದೆ. ಗದಗ ಜಿಮ್ಸ್ ಆಸ್ಪತ್ರೆಯ NICU ಸೇರಿದಂತೆ ನಗರದ ವಿವಿಧ ಖಾಸಗಿ ಆಸ್ಪತ್ರೆ ಹಾಗೂ ಹುಬ್ಬಳ್ಳಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಂಗನಕಟ್ಟಿ ಗ್ರಾಮದಲ್ಲಿ ಡೆಂಗ್ಯೂ ಹೆಚ್ಚಾದರೂ ಆರೋಗ್ಯ ಇಲಾಖೆ ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಏನೂ ತಿಳಿಯದಂತೆ ಕಣ್ಮುಚ್ಚಿ ಕುಳಿತಿದೆ. ಬಹುತೇಕ ಮನೆಗಳಲ್ಲಿ ಮಕ್ಕಳು ಜ್ವರದಿಂದ ಬಳಲುತ್ತಿರುವುದು ಕಂಡು ಬಂದಿದೆ.
ಇಷ್ಟಾದ್ರೂ ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯವಹಿಸಿದೆ. ಡೆಂಗ್ಯೂ ಹೆಚ್ಚಾಗುತ್ತಿರುವ ಕಾರಣ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಗ್ರಾಮದಲ್ಲಿ ಆರೋಗ್ಯ ಶಿಬಿರ ಆಯೋಜನೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.