ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ನಲ್ಲಿ ಐವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದಾಳಿ ಬೆನ್ನಲ್ಲೇ ಮೈಕ್ರೋ ಮ್ಯಾನೇಜಿಂಗ್ ಕುರಿತು ಮೋದಿ ಸರ್ಕಾರಕ್ಕೆ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ‘ಮಾಸ್ಕೋದಲ್ಲಿ ಐಸಿಸ್ ದಾಳಿಯ ನಡುವೆ ‘ಮೈಕ್ರೋ ಮ್ಯಾನೇಜಿಂಗ್ ಬ್ಯಾಕ್ಫೈರ್” (ಹಿನ್ನಡೆ)ಗಳನ್ನು ಅನುಭವಿಸುತ್ತಿದೆ ಎಂದು ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
‘ಮಾಸ್ಕೋ ಬಳಿ ಉಗ್ರರ ದಾಳಿಗೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿ, 140 ಮಂದಿ ಗಾಯಗೊಂಡಿದ್ದಾರೆ. ರಷ್ಯನ್ನರನ್ನು ಕೊಂದಿರುವುದಾಗಿ ಎಂದು ಐಸಿಸ್ ಹೇಳಿಕೊಂಡಿದೆ. ದಾಳಿ ಮಾಡಿದ ಉಗ್ರರಲ್ಲಿ ಒಬ್ಬ ಉಗ್ರನೂ ಕೂಡ ಸಿಕ್ಕಿಬಿದ್ದಿಲ್ಲ. ರಷ್ಯಾವನ್ನು ಪುಟಿನ್ ಮೈಕ್ರೋ ಮ್ಯಾನೇಜ್ ಮಾಡಬೇಕಾಗಿತ್ತು.. ಮೋದಿ ! ಎದ್ದೇಳಿ!! ಮೈಕ್ರೋ ಮ್ಯಾನೇಜಿಂಗ್ ಬ್ಯಾಕ್ಫೈರ್ಸ್ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸಂಗೀತ ಕಚೇರಿ ಆಯೋಜನೆ ಮಾಡಲು ಸಿದ್ಧತೆ ನಡೆಸಿದ್ದ ಕ್ರೋಕಸ್ ಸಿಟಿ ಹಾಲ್ಗೆ ಕೆಲವು ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಪ್ರವೇಶಿಸಿದರು. ಸಂಗೀತ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಗುಂಡು ಹಾರಿಸಿದರು. ಗುಂಡಿನ ಸದ್ದು ಮೊಳಗುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಸುಮಾರು 7 ಸಾವಿರ ಜನ ಓಡಿ ಹೋಗಲು ಯತ್ನಿಸಿದ್ದು, ಅದಕ್ಕೂ ಅವಕಾಶ ನೀಡದಂತೆ ಉಗ್ರರು ಪ್ರವೇಶದ್ವಾರವನ್ನು ಬಂದ್ ಮಾಡಿ ದಾಳಿ ನಡೆಸಿದ್ದಾರೆ. ಬುಲೆಟ್ಗಳಿಂದ ತಪ್ಪಿಸಿಕೊಳ್ಳಲು ಜನರು ತಾವು ಕುಳಿತಿದ್ದ ಆಸನಗಳ ಹಿಂದೆ, ನೆಲಮಾಳಿಗೆ ಅವಿತಿದ್ದರೂ ಅವರನ್ನೂ ಬಿಡಗೆ ಗುಂಡು ಹಾರಿಸಿ ಕೊಲ್ಲಲಾಗಿದೆ. ಸಭಾಂಗಣದಲ್ಲಿ ಗುಂಡು ಹಾರಿಸಿದ ನಂತರ, ಗ್ರೆನೇಡ್ ದಾಳಿ ಕೂಡ ನಡೆಸಲಾಗಿದೆ.
ರಷ್ಯಾದ ಪ್ರಸಿದ್ಧ ರಾಕ್ ಬ್ಯಾಂಡ್ ‘ಪಿಕ್ನಿಕ್’ ಸಂಗೀತ ಕಚೇರಿಯಲ್ಲಿ ಪಾಲ್ಗೊಳ್ಳಲು ಕ್ರೋಕಸ್ ಸಿಟಿ ಹಾಲ್ನಲ್ಲಿ ಜನಸಂದಣಿ ಸೇರಿದ್ದಾಗ ಈ ದಾಳಿ ನಡೆದಿದೆ. ಈ ಸಭಾಂಗಣದಲ್ಲಿ 6,000 ಕ್ಕೂ ಹೆಚ್ಚು ಜನರು ಕುಳಿತುಕೊಳ್ಳುವ ಸಾಮರ್ಥ್ಯ ಇದೆ. ಸಂಗೀತ ಕಾರ್ಯಕ್ರಮದ ಟಿಕೆಟ್ಗಳು ಮೊದಲೇ ಎಲ್ಲಾ ಸೇಲ್ ಆಗಿತ್ತು. ಅಂದಾಜಿನ ಪ್ರಕಾರ ಘಟನೆ ನಡೆದ ವೇಳೆ ಸಭಾಂಗಣದಲ್ಲಿ 6200 ಜನರು ಇದ್ದರು ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಮೊದಲೇ ಪ್ಲಾನ್ ಹಾಕಿ ಈ ದಾಳಿ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.