ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಟೆಂಪಲ್ ರನ್ ಮುಂದುವರಿಸಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಕುಟುಂಬ ಸಮೇತರಾಗಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು ಮುಂಜಾನೆಯಿಂದ ದೇವಾಲಯದಲ್ಲಿ ನಡೆಯುತ್ತಿರುವ ಚಂಡಿಕಾಯಾಗದಲ್ಲಿ ಅವರು ಭಾಗಿಯಾಗಿದ್ದಾರೆ.
ಯಡಿಯೂರಪ್ಪ, ಪುತ್ರ ವಿಜಯೇಂದ್ರ ಹಾಗೂ ರಾಘವೇಂದ್ರ ಅವರು ಶನಿವಾರ ರಾತ್ರಿ 9 ಗಂಟೆಗೆ ದೇವಾಲ ಯಕ್ಕೆ ಆಗಮಿಸಿ, ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದಲ್ಲೇ ತಂಗಿದ್ದು, ಇಂದು ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಯಾಗದಲ್ಲಿ ಭಾಗಿಯಾಗಿದ್ದಾರೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಶನಿವಾರ ರಾತ್ರಿ ಬಿಎಸ್ವೈ ಕುಟುಂಬದ ವತಿಯಿಂದ ಹೊರನಾಡಲ್ಲಿ ರಥೋತ್ಸವ ಸೇವೆ ಸಹ ನಡೆಯಿತು. ಈ ವೇಳೆ ಅನ್ನಪೂರ್ಣೇಶ್ವರಿ ದೇವಿಯ ರಥವನ್ನು ಯಡಿಯೂರಪ್ಪ, ವಿಜಯೇಂದ್ರ ಹಾಗೂ ರಾಘವೇಂದ್ರ ಅವರು ಎಳೆದರು. ರಥೋತ್ಸವ ಸೇವೆಯಲ್ಲಿ ಯಡಿಯೂರಪ್ಪ ಅವರ ಇಡೀ ಕುಟುಂಬ ಪಾಲ್ಗೊಂಡಿತ್ತು.