ಬೆಂಗಳೂರು: ಕಾವೇರಿ ನೀರಿನಿಂದ (Cauvery Water) ಕಾರನ್ನು ಸ್ವಚ್ಛಗೊಳಿಸಿದ ಮೂವರಿಗೆ ಬೆಂಗಳೂರು ಜಲಮಂಡಳಿ (BWSSB) 5 ಸಾವಿರ ರೂ. ದಂಡ (Fine) ವಿಧಿಸಿದೆ. ಸದಾಶಿವನಗರದಲ್ಲಿ ಕಾರನ್ನು ಸ್ವಚ್ಛಗೊಳಿಸಿದ ಮಹಿಳೆಗೆ ಸ್ಥಳದಲ್ಲೇ 5 ಸಾವಿರ ದಂಡ ವಿಧಿಸಿದೆ. ಅದೇ ರೀತಿಯಲ್ಲಿ ಮಹಾದೇವಪುರ ಮತ್ತು ಡಾಲರ್ಸ್ ಕಾಲೋನಿಯಲ್ಲಿ ಇಬ್ಬರಿಗೆ ದಂಡ ವಿಧಿಸಲಾಗಿದೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಕಾರ್ ವಾಶ್, ಹೂ ತೋಟಕ್ಕೆ ಕಾವೇರಿ ನೀರು ಬಳಸದಂತೆ ಈಗಾಗಲೇ ಜಲಮಂಡಳಿ ಈಗಾಗಲೇ ಸೂಚನೆ ನೀಡಿದೆ. ಸೂಚನೆ ಹೊರತಾಗಿಯೂ ಕಾರನ್ನು (Car) ಸ್ವಚ್ಛ ಮಾಡಿದ್ದಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ. ವಾಹನ ತೊಳೆಯಲು, ತೋಟಗಾರಿಕೆ, ಫ್ಲಶ್ ಮಾಡಲು, ಪಾರ್ಕಿಂಗ್ ಪ್ರದೇಶವನ್ನು ಸ್ವಚ್ಛಗೊಳಿಸಲು ಹಾಗೂ ಇತ್ಯಾದಿ ಬಳಕೆಗೆ ಕುಡಿಯುವ ನೀರನ್ನು ಬಳಸದಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಜಲಮಂಡಳಿ ಪ್ರಕಟಣೆಯ ಮೂಲಕ ನಿಷೇಧ ಈಗಾಗಲೇ ಆದೇಶವನ್ನು ಜಾರಿ ಮಾಡಿದೆ.