ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ಅವರ ನಡೆ ರಾಜಕೀಯ ಪ್ರೇರಿತವಾಗಿದೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ, ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದರೆ ತಪ್ಪಾಗಲಾರದು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಕೈಲಾಗದವನು ಮೈಪರಚಿಕೊಂಡ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಲ್ಲ ಎಡವಟ್ಟುಗಳಿಗೂ ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸುವುದೇ ತಮ್ಮ ಏಕೈಕ ಕೆಲಸ ಎಂದು ಭಾವಿಸಿದಂತಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟೀಕಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಬರ, ಪ್ರವಾಹ ಮುಂತಾದ ನೈಸರ್ಗಿಕ ವಿಕೋಪ ಎದುರಾದಾಗ ಕೇಂದ್ರ ಸರ್ಕಾರದ ನೆರವಿಗೆ ಕಾಯದೇ ರಾಜ್ಯ ಸರ್ಕಾರದ ಹಣದಿಂದಲೇ ಪರಿಹಾರ ನೀಡಿತ್ತು. ಆದರೆ ರೈತರ ಮೇಲೆ ಕಿಂಚಿತ್ತು ಕಾಳಜಿ ಇಲ್ಲದ ಸಿಎಂ ಸಿದ್ದರಾಮಯ್ಯ ಸರ್ಕಾರ ಬರ ಪರಿಹಾರದಲ್ಲೂ ರಾಜಕೀಯ ಮಾಡಿ ರೈತರಿಗೆ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
2019ರಲ್ಲಿ 9,72,517 ಹೆಕ್ಟೇರ್ ಬೆಳೆ ಹಾನಿಯಾಗಿತ್ತು. ಆಗ 6,71,314 ಫಲಾನುಭವಿಗಳಿಗೆ 1232.20 ಕೋಟಿ ರೂ ಪರಿಹಾರ ನೀಡಲಾಗಿತ್ತು. 2020ರಲ್ಲಿ 19,68,247 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆಗ 12,00,346 ಫಲಾನುಭವಿಗಳಿಗೆ 941.70 ಕೋಟಿ ರೂ. ಪರಿಹಾರ ನೀಡಲಾಗಿತ್ತು. 2021ರಲ್ಲಿ 14,93,811 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆಗ 18,56,083 ಫಲಾನುಭವಿಗಳಿಗೆ 2446.10 ಕೋಟಿ ರೂ ಪರಿಹಾರ ನೀಡಲಾಗಿತ್ತು. 2022 ರಲ್ಲಿ 13,09,421, ಹೆಕ್ಟೇರ್ ಬೆಳೆಹಾನಿ ಆಗಿತ್ತು. ಆಗ 14,62,841 ಫಲಾನುಭವಿಗಳಿಗೆ 2031.15 ಕೋಟಿ ರೂ. ಪರಿಹಾರ ನೀಡಲಾಗಿತ್ತು.
ಸಿದ್ದರಾಮಯ್ಯ ಅವರ ಈ ನಾಟಕ ಹೊಸದೇನಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ರೈತರಿಗೆ ಬರ ಪರಿಹಾರ ವಿಷಯದಲ್ಲಿ ಇದೇ ರೀತಿ ನಾಟಕವಾಡುತ್ತಿದೆ. 2013-14ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಜುಲೈ – ಆಗಸ್ಟ್ ಅವಧಿಯ ಮುಂಗಾರಿನ ಬರಗಾಲಕ್ಕೆ 2014 ರ ಏಪ್ರಿಲ್ನಿಂದ ಇನ್ಪುಟ್ ಸಬ್ಸಿಡಿ ಪಾವತಿ ಮಾಡಲು ಶುರು ಮಾಡಿತ್ತು. ಅಂದರೆ ಅದಕ್ಕೆ ತೆಗೆದುಕೊಂಡ ಅವಧಿ 9 ತಿಂಗಳು ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.