ಜೈಪುರ: ಐಪಿಎಲ್ 2024ರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
Harshit Rana: ಮಯಾಂಕ್ ಅಗರ್ವಾಲ್ʼಗೆ ಗುರಾಯಿಸಿದ ಹರ್ಷಿತ್ ರಾಣಾಗೆ ಬಿತ್ತು ಭಾರೀ ದಂಡ.!
ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಆರಂಭಿಸಿದೆ. ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಕ್ರೀಸ್ನಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಎರಡನೇ ಓವರ್ನಲ್ಲಿ ಮೊದಲ ವಿಕೆಟ್ ಕಳೆದುಕೊಂಡಿದೆ. ನವೀನ್ ಉಲ್ ಹಕ್ ಅವರು ಜೋಸ್ ಬಟ್ಲರ್ ಅವರನ್ನು ಔಟ್ ಮಾಡಿದ್ದಾರೆ. ಸದ್ಯ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಕ್ರೀಸ್ನಲ್ಲಿದ್ದಾರೆ.
ರಾಜಸ್ಥಾನ ಸಂಭಾವ್ಯ ತಂಡ
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಧ್ರುವ್ ಜುರೆಲ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್.
ಲಕ್ನೋದ ಸಂಭಾವ್ಯ ತಂಡ
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ದೀಪಕ್ ಹೂಡಾ, ಕೆಎಲ್ ರಾಹುಲ್ (ನಾಯಕ), ನಿಕೋಲಸ್ ಪೂರನ್, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ನವೀನ್–ಉಲ್–ಹಕ್, ಯಶ್ ಠಾಕೂರ್, ರವಿ ಬಿಷ್ಣೋಯಿ.