ಸೋಲಿನೊಂದಿಗೆ ಲೀಗ್ ಆರಂಭಿಸಿರುವ ಆರ್ಸಿಬಿ ತನ್ನ ತವರಿನಲ್ಲಿ ಅಂದರೆ ಬೆಂಗಳೂರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಆರ್ಸಿಬಿಯ ಎದುರಾಳಿಯಾಗಿ ಪಂಜಾಬ್ ಕಿಂಗ್ಸ್ (RCB vs PBKS) ಕಣಕ್ಕಿಳಿಯುತ್ತಿದೆ.
ಒಂದೆಡೆ ಆರ್ಸಿಬಿ ತನ್ನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಇನ್ನೊಂದೆಡೆ ಆಡಿದ ಮೊದಲ ಪಂದ್ಯದಲ್ಲೇ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿರುವ ಪಂಜಾಬ್ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ಎದುರು ನೋಡುತ್ತಿದೆ.
ಆಡಿದ ಮೊದಲ ಪಂದ್ಯದಲ್ಲೇ ಆರ್ಸಿಬಿಯ ನ್ಯೂನತೆಗಳು ಜಗಜ್ಜಾಹೀರಾಗಿವೆ. ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಬಲಹೀನವಾಗಿ ಕಾಣುತ್ತಿದೆ. ಅದರಲ್ಲೂ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯ ಅಗತ್ಯವಿದೆ. ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ತಂಡದ ಬೌಲರ್ಗಳು ಪರಿಣಾಮಕಾರಿಯಾಗಿರಲಿಲ್ಲ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಾದರೂ ಬೌಲರ್ಗಳಿಂದ ಉತ್ತಮ ಪ್ರದರ್ಶನದ ಅಗತ್ಯವಿದೆ.
ಗಳು ಫಾರ್ಮ್ ಕಂಡುಕೊಳ್ಳಬೇಕಾಗಿದೆ. ಆರಂಭಿಕರಾಗಿ ಫಾಫ್ ಡುಪ್ಲೆಸಿಸ್ ಅಬ್ಬರಿಸಿದ್ದನ್ನು ಬಿಟ್ಟರೆ ಉಳಿದಂತೆ ತಂಡದ ಅಗ್ರ ಕ್ರಮಾಂಕ ಸಪ್ಪೆ ಪ್ರದರ್ಶನ ನೀಡಿತ್ತು. ವಿರಾಟ್ ಕೊಹ್ಲಿ ಸೇರಿದಂತೆ ರಜತ್ ಪಾಟಿದರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ರಾಮರೂನ್ ಗ್ರೀನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಇದು ತಂಡವನ್ನು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿಸಿತ್ತು. ಆದರೆ ಕೆಳಕ್ರಮಾಂಕದಲ್ಲಿ ಜೊತೆಯಾದ ದಿನೇಶ್ ಕಾರ್ತಿಕ್ ಮತ್ತು ಅನುಜ್ ರಾವತ್ ಜಾಣತನದಿಂದ ಆಟವಾಡಿ ತಂಡದ ಸ್ಕೋರ್ ಅನ್ನು 170 ರನ್ಗಳ ಗಡಿ ದಾಟಿದರು. ಆದರೆ ಕೆಳ ಕ್ರಮಾಂಕದ ಮೇಲೆ ಪ್ರತಿ ಬಾರಿಯೂ ಅವಲಂಬಿತವಾಗುವುದು ಸಾಧ್ಯವಿಲ್ಲ. ಹೀಗಾಗಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ದೊಡ್ಡ ಇನ್ನಿಂಗ್ಸ್ ಆಡಬೇಕಾಗುತ್ತದೆ