ಅಮೆರಿಕದ ಪೆನ್ಸಿಲ್ವೇನಿಯಾದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಯುವತಿ ಮೃತಪಟ್ಟಿದ್ದಾರೆ ಎಂದು ಭಾರತೀಯ ರಾಜಭಾರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಮೂಲದ ಉದ್ಯೋಗಿ ಅರ್ಶಿಯಾ ಜೋಶಿ(24) ಮಾ.21ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದಿಲ್ಲಿ ಮೂಲದ ಜೋಶಿ, ತಮ್ಮ ಕಾರಿನಲ್ಲಿ ಪಯಣಿಸುವಾಗ ಅಪಘಾತವಾಗಿ ಮೃತಪಟ್ಟಿದ್ದಾರೆ. ಆಕೆಯ ಪೋಷಕರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.