ಚಿಕ್ಕಮಗಳೂರು:– ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮ ವರ್ತೆಗುಂಡಿ ಬಳಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ಜರುಗಿದೆ.
ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ನುಗ್ಗಿ ಬಂದಿದೆ. ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಲಿಟ್ಟು ಕಾಡಾನೆ ಕೊಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಫಿನಾಡಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರಿದೆ. ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ಮಾಡಿ ಇತ್ತೀಚಿಗೆ ಬಲಿ ಪಡೆದಿತ್ತು