ಐಪಿಎಲ್ 2024 ರಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಮಾರ್ಚ್ 25 ರಂದು ಅಂದರೆ ಇಂದು ಪಂದ್ಯ ನಡೆಯುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಒಂದೆಡೆ ಆರ್ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಸೋತಿದ್ದರೆ, ಇನ್ನೊಂದೆಡೆ ಪಂಜಾಬ್ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಬರುತ್ತಿದೆ.
ಇದೀಗ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಮುನ್ನಡೆಯಲು ಬಯಸಿದೆ.ಬೆಂಗಳೂರಿನಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಲ್.
ಪಂಜಾಬ್ ಕಿಂಗ್ಸ್
ಶಿಖರ್ ಧವನ್ (ನಾಯಕ), ಜಾನಿ ಬೈರ್ಸ್ಟೋವ್, ಪ್ರಭ್ಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್. ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್.