ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವನ್ನಪ್ಪಿ ರುವ ಘಟನೆ ನಡೆದಿದೆ. ತುಮಕೂರಿನ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಸಾವನ್ನಪ್ಪಿದ ವಿದ್ಯಾರ್ಥಿ.
ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ, ದುರದೃಷ್ಟವಶಾತ್ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.